ಸುಳ್ಯ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್
ಅಭಿವೃದ್ಧಿ ಕಾರ್ಯಗಳಿಗೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ
ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿ ಮಾಡಲಾಯಿತು ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ, ಸದಸ್ಯೆ ವಿಮಲಾಪ್ರಸಾದ್,ಅರೆ ಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ,ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೋ, ಸಲೀಂ ಪೆರುಂಗೋಡಿ, ಜೆ. ಬಿ. ಹನೀಫ್, ಮೊದಲದವರು ಉಪಸ್ಥಿತರಿದ್ದರು.