ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಸಿದ್ಧತೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗುಂಡ್ಯ ಹಾಗೂ ಕಬಕ ಚೆಕ್ ಪೋಸ್ಟ್ಗಳಿಗೆ ಭೇಟಿ
ನೀಡಿ ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ
ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು. ಸೂಕ್ಷ್ಮ ಪ್ರದೇಶ ಹಾಗೂ ಸೂಕ್ಷ್ಮ ಮತಗಟ್ಟೆಗಳಾದ ಉಪ್ಪಿನಂಗಡಿ, ಗೊಳಿತಟ್ಟು, ಮಾದೇರಿ, ಬನ್ನೆಂಗಳ,ಕಬಕ, ಹಾರಾಡಿ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಸರು.
ಮುಂಬರುವ ಚುನಾವಣೆ ಕರ್ತವ್ಯಕ್ಕೆ ಜಿಲ್ಲೆಗೆ ಆಗಮಿಸುವ ಅರೆ ಸೇನಾಪಡೆ ಗಳಿಗೆ ವಾಸ್ತವ್ಯ ಕಲ್ಪಿಸಲು ಗುರುತಿಸಿರುವ ಶಾಲೆ , ಕಾಲೇಜು ಗಳಿಗೆ ಭೇಟಿ ನೀಡಿ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.