ಕಾಸರಗೋಡು: ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ
ಪ್ರತಿನಿಧಿ ಪತ್ರಿಕೆಯ ಮಂಗಳೂರು ವಿಭಾಗದ ಮುಖ್ಯಸ್ಥ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರದಾನ ಮಾಡಲಾಯಿತು.
ನೀಲೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ದತ್ತಿನಿಧಿ ಪ್ರಶಸ್ತಿಯ ಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲೂರು ಸರಕಾರಿ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರಕ್ಕೆ ನೀಡುವುದಾಗಿ ಶ್ರೀನಿವಾಸ ನಾಯಕ್ ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ಬದ್ರುದ್ದಿನ್ ಮಾಣಿ, ದೇರಳಕಟ್ಟೆ ವಿದ್ಯಾ ರತ್ನ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೋಟ್ಟು, ರಾಜ್ಯ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಲ್ ಬೈಲ್, ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುಬ್ಬಯ್ಯ ಕಟ್ಟೆ, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಫದ ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್,ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಪ್ರಮುಖರಾದ ಗಂಗಾಧರ್, ಅಖಿಲೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.














