ಪುತ್ತೂರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣ ಮಹೋತ್ಸವ, ಉಚಿತ ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವ ಸಮಾವೇಶಕ್ಕೆ
ಸಿದ್ಧತೆ ಪೂರ್ಣಗೊಂಡಿದೆ. ಕಾರ್ಯಕ್ರಮಕ್ಕೆ ಹೊರೆ ಕಾಣಿಕೆ ಸಮರ್ಪಣೆ ನ.28ರಂದು ನಡೆಯಿತು.ಪುತ್ತೂರು ತಾಲೂಕು ಮತ್ತು ಅಕ್ಕಪಕ್ಕದ ತಾಲೂಕುಗಳಿಂದ ಮಹೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ದರ್ಬೆ ವೃತ್ತದಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆದು ಹೊರೆ ಕಾಣಿಕೆ ಮಾಡಲಾಯಿತು.ಸುಳ್ಯದ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವದ ಸುಳ್ಯ ವಲಯ ಸಮಿತಿ ವತಿಯಿಂದ ಹೊರೆ ಕಾಣಿಕೆ ಸಮರ್ಪಣೆ ಮಾಡಲಾಯಿತು. ವಲಯ ಸಮಿತಿ ಅಧ್ಯಕ್ಷ ಸುಧಾಕರ ಬಾಟೋಳಿ ನೇತೃತ್ವದಲ್ಲಿ ಹೊರೆ ಕಾಣಿಕೆ ಸಮರ್ಪಿಸಿದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಟ್ರಸ್ಟ್ ಹಾಗೂ ಶ್ರೀನಿವಾಸ ಕಲ್ಯಾಣ, ಮೆಹೋತ್ಸವ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ನಾಳೆಭವ್ಯ ಮೆರವಣಿಗೆ:
ನ.29ರಂದು ಬೆಳಿಗ್ಗಿನಿಂದ ವಿವಿಧ ಕಾರ್ಯಕ್ರಮಗಳು ನಡೆದು ಸಂಜೆ ಬೊಳುವಾರಿನಲ್ಲಿ ಶ್ರೀದೇವಿ-ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಲಿದೆ. ಶ್ರೀ ದೇವರ ಪುರಪ್ರವೇಶವನ್ನು ಅದ್ದೂರಿ ಶೋಭಾಯಾತ್ರೆಯ ಮೂಲಕ ನಡೆಯಲಿದೆ. ಮೆರವಣಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಗೆ ಬಂದು ವಿಶಾಲ ಸಭಾ ಮಂಟಪದಲ್ಲಿ ದೇವರ ಸಾನಿಧ್ಯಸಂಪನ್ನ ನಡೆಯಲಿದೆ. ಬಳಿಕ ಶ್ರೀ ದೇವರ ಅಲಂಕಾರ, ರಾತ್ರಿ ಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ ನಾಡಿನ 12 ಪೀಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ನಡೆಯಲಿದೆ.30ರಂದು ಬೆಳಿಗ್ಗೆ ಸುಪ್ರಭಾತ ಪೂಜೆ, ಭಜನಾ ಸಂಕೀರ್ತನೆ, ಉಚಿತ ಸಾಮೂಹಿಕ ವಿವಾಹ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಅದ್ಧೂರಿಯ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.












