ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಸ್ಟೋಟಕ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದ್ರಾಬಾದ್ ತಂಡವು 47 ರನ್ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ 20 ಓವರ್ಗಳಲ್ಲಿ
2 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಕೇವಲ 68 ಎಸೆತಗಳಲ್ಲಿ 10 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಅಜೇಯ 135 ರನ್ ಗಳಿಸಿದರು. ಟ್ರಾವಿಸ್ ಹೆಡ್ (37 ರನ್), ನಾಯಕ ಇಶಾನ್ ಕಿಶನ್ (25 ರನ್) ಹಾಗೂ ಕ್ಲಾಸೆನ್ (37ರನ್) ಕೂಡ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು.
243 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಡೆಲ್ಲಿ ತಂಡವು 20 ಓವರ್ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಲಷ್ಟೇ ಶಕ್ತವಾಯಿತು.ತಂಡದ ಪರ ಕೆ.ಎಲ್. ರಾಹುಲ್ (37 ರನ್), ನಿತೀಶ್ ರಾಣಾ (57 ರನ್) ಹಾಗೂ ಸಮೀರ್ ರಿಜ್ವಿ (41 ರನ್) ಬಾರಿಸಿದರು. ಆದರೆ, ಮಧ್ಯಮ ಕ್ರಮಾಂಕದ ಬ್ಯಾಟರ್ಗಳಿಂದ ಉತ್ತಮ ರನ್ ಬರಲಿಲ್ಲ. ಎಸ್ಆರ್ಎಚ್ ಪರ ಈಷನ್ ಮಲಿಂಗ 4 ವಿಕೆಟ್ ಪಡೆದರು.


















