ಹೈದರಾಬಾದ್: ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ
ಸನ್ರೈಸರ್ಸ್ ಹೈದರಾಬಾದ್ ಬೃಹತ್ ಮೊತ್ತ ಪೇರಿಸಿದೆ. ಸೋತು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 277 ರನ್ ಪೇರಿಸಿದೆ. ಆರಂಭದಿಂದಲೂ ಸಿಡಿಲಬ್ಬರದ
ಬ್ಯಾಟಿಂಗ್ ನಡೆಸಿದ ಎಸ್ಆರ್ಎಚ್ ಬ್ಯಾಟರ್ಗಳು ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಟ್ರಾವಿಸ್ ಹೆಡ್ ಕೇವಲ 24 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 62 ರನ್ ಬಾರಿಸಿದರೆ, ಸ್ಪೋಟಕ ಇನ್ನೀಂಗ್ಸ್ ಕಟ್ಟಿದ ಅಭಿಷೇಕ್ ಶರ್ಮ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 63 ರನ್ ಬಾರಿಸಿದರು. ಹೆನ್ರಿ ಚ್ ಕ್ಲಾಸೆನ್ ಕೇವಲ 34 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ ಅಜೇಯ 80 ರನ್,ಆಡಮ್ ಮರ್ಕರಮ್ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 42 ರನ್ ಬಾರಿಸಿದರು. ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಬ್ಯಾಟರ್ಗಳು ಸಿಕ್ಸರ್ ಬೌಂಡರಿಗಳ ಸುರಿಮಳೆಯನ್ನೇ ಸುರಿಸಿದರು