ಚೆನ್ನೈ: ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ತಂಡ ರಾಜಸ್ಥಾನಕ್ಕೆ 176 ರನ್ಗಳ ಗೆಲುವಿನ ಗುರಿ ನೀಡಿದೆ. ಟಾಸ್ ಗೆದ್ದ
ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಸನ್ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟ್ ಮಾಡಿ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಪೇರಿಸಿತು.
ಹೈದರಾಬಾದ್ ಪರ ರಾಹುಲ್ ತ್ರಿಪಾಠಿ 37, ಟ್ರಾವಿಸ್ ಹೆಡ್ 34, ಹೆನ್ರಿಚ್ ಕ್ಲಾಸಿನ್ 50 ರನ್ ಹೊಡೆದು ಗಮನ ಸೆಳೆದರು. ರಾಜಸ್ಥಾನ ಪರ ಬೌಲ್ಟ್, ಅವೇಶ್ ಖಾನ್ ತಲಾ 3 ವಿಕೆಟ್ ಪಡೆದರು. ಇಂದು ಗೆಲುವು ಸಾಧಿಸುವ ತಂಡ ಐಪಿಎಲ್ ಫೈನಲ್ ಪ್ರವೇಶಿಸಲಿದೆ.









