ಲಖನೌ: ಏಕದಿನ ವಿಶ್ವಕಪ್ 2023 ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ಮೊದಲ ಗೆಲುವು ದಾಖಲಿಸಿದೆ. ಹ್ಯಾಟ್ರಿಕ್ ಸೋಲು ಕಂಡಿದ್ದ ಶ್ರೀಲಂಕಾ ನೆದರ್ಲೆಂಡ್ಸ್ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 49.4 ಓವರ್ಗಳಲ್ಲಿ
262 ರನ್ನಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನಟ್ಟಿದ ಲಂಕಾ 48.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಸದೀರ ಸಮರವಿಕ್ರಮ ಅಜೇಯ 91, ಪಥುಮ್ ನಿಸ್ಸಾಂಕ 54, ಚರಿತ ಅಸಲಂಕಾ 41 ಹಾಗೂ ಧನಂಜಯ ಡಿಸಿಲ್ವಾ 30 ರನ್ ಗಳಿಸಿದರ. ನೆದರ್ಲೆಂಡ್ಸ್ ಪರ ಆರ್ಯನ್ ದತ್ ಮೂರು ವಿಕೆಟ್ ಗಳಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 91ಕ್ಕೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಕೆಳ ಕ್ರಮಾಂಕದಲ್ಲಿ ಸೈಬ್ರಾಂಡ್ ಎಂಗಲ್ಬ್ರೆಕ್ಟ್ (70) ಹಾಗೂ ವ್ಯಾನ್ ಬೀಕ್ (59) ಆಕರ್ಷಕ ಅರ್ಧಶತಕಗಳನ್ನು ಗಳಿಸುವ ಮೂಲಕ ಸವಾಲಿನ ಮೊತ್ತ ಪೇರಿಸಲು ನೆರವಾದರು. ಲಂಕಾ ಪರ ದಿಲ್ಶಾನ್ ಮಧುಶಂಕಾ ಮತ್ತು ರಜಿತ ತಲಾ ನಾಲ್ಕು ವಿಕೆಟ್ ಗಳಿಸಿದರು.