ಹೈದರಾಬಾದ್: ಕುಶಾಲ್ ಮೆಂಡೀಸ್ ಹಾಗೂ ಸದೀರ ಸಮರವಿಕ್ರಮ ಸಿಡಿಸಿದ ಅಮೋಘ ಶತಕಗಳ ಬಲದಿಂದ ಶ್ರೀಲಂಕಾ ಕ್ರಿಕೆಟ್ ತಂಡವು ಪಾಕಿಸ್ತಾನ ಎದುರು ಬೃಹತ್ ಮೊತ್ತ ಕಲೆಹಾಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ
ಶ್ರೀಲಂಕಾ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 344 ರನ್ ಗಳಿಸಿದೆ. ಲಂಕಾ ಪರ ಪಾಥುಮ್ ನಿಸ್ಸಂಕಾ (51) ಮತ್ತು ಕುಶಾಲ್ ಮೆಂಡಿಸ್ ಎರಡನೇ ವಿಕೆಟ್ ಪಾಲುದಾರಿಕೆಯಲ್ಲಿ ಶತಕದ ಜೊತೆಯಾಟ ನೀಡುವ ಭದ್ರ ಬುನಾದಿ ಹಾಕಿಕೊಟ್ಟರು.
ಕೇವಲ 65 ಎಸೆತಗಳಲ್ಲಿ ಶತಕ ಪೂರೈಸಿದ ಮೆಂಡಿಸ್ 77 ಎಸೆತಗಳನ್ನು ಎದುರಿಸಿದ ಅವರು 14 ಬೌಂಡರಿ ಮತ್ತು 6 ಸಿಕ್ಸರ್ ಸಹಿತ 122 ರನ್ ಚಚ್ಚಿದರು. ಅವರಿಗೆ ಉತ್ತಮ ಸದೀರ 89 ಎಸೆತಗಳಲ್ಲಿ 108 ರನ್ ಬಾರಿಸಿದರು. 345 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ16.5 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿದೆ.