ನವದೆಹಲಿ:ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸಂದರ್ಭದಲ್ಲಿ ಗಾಯಗೊಂಡಿದ್ದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಮೂವರು
ಕನ್ನಡಿಗರು ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ಕೆ.ಎಲ್. ರಾಹುಲ್ ಉಪನಾಯಕನಾಗಿ ಮುಂದುವರೆದಿದ್ದಾರೆ. ಸರನ್ಶ್ ಜೈನ್ ಅವರಿಗೆ ಇದೇ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರ ಜೊತೆಗೆ ಕನ್ನಡಿಗರಾದ ಪ್ರಸಿದ್ಧ ಕೃಷ್ಣ ಹಾಗೂ ದೇವದತ್ತ ಪಡಿಕ್ಕಲ್ ಕೂಡ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡವು ಆಗಸ್ಟ್ 7ರಂದು ಕೊಲಂಬೊದಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಅಭ್ಯಾಸ ಪಂದ್ಯದ ಮೂಲಕ ಅಭಿಯಾನ ಆರಂಭಿಸಲಿದೆ. ಆಗಸ್ಟ್ 15ರಿಂದ ಗಾಲೆಯಲ್ಲಿ ಮೊದಲ ಪಂದ್ಯ ಮತ್ತು ಆಗಸ್ಟ್ 23ರಿಂದ ಎರಡನೇ ಪಂದ್ಯ ನಡೆಯಲಿದೆ. ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಓಟದಲ್ಲಿ ಉಳಿದುಕೊಳ್ಳಲು ಭಾರತ ತಂಡಕ್ಕೆ ಈ ಸರಣಿ ಮಹತ್ವದ್ದಾಗಿದೆ.
ಭಾರತ ತಂಡ:
ಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್) ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ತ ಪಡಿಕ್ಕಲ್ ಹಾಗೂ ಸರನ್ಶ್ ಜೈನ್.









