ಸುಳ್ಯ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 18ರಿಂದ (ನಾಳೆ) ಆರಂಭವಾಗಲಿದ್ದು, ಏಪ್ರಿಲ್ 2ರವರೆಗೆ ನಡೆಯಲಿದೆ. ರಾಜ್ಯದಾದ್ಯಂತ
ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, 2,871 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಪಮುಂಜಾಗ್ರತಾ ಕ್ರಮವಾಗಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಬುಧವಾರ ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ) ವಿಷಯದ ಪರೀಕ್ಷೆ ನಡೆಯಲಿದೆ.8,12,855 ಮಂದಿ ಹೊಸಬರು, 62,845 ಮಂದಿ ಪುನರಾವರ್ತಿತ ಮತ್ತು 27,189 ಮಂದಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಸುಳ್ಯ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಬಾರಿ ತಾಲೂಕಿನಿಂದ 1910 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಸುಳ್ಯ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಿವೆ. ಸುಳ್ಯ ನಗರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ 440 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿನಗರದಲ್ಲಿ 238 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ 268 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 178 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆ ಇಲ್ಲಿ 372 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 390 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಳ್ಯ ತಾಲೂಕಿನ 37 ಪ್ರೌಢಶಾಲೆಗಳಿಂದ 1800 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, ಹೊಸ ಖಾಸಗಿ ಅಭ್ಯರ್ಥಿಗಳಾಗಿ 61 ಮಂದಿ, ಪುನರಾವರ್ತಿತ ಶಾಲಾ ವಿದ್ಯಾರ್ಥಿಗಳು 30 ಹಾಗೂ ಪುನರಾವರ್ತಿತ ಖಾಸಗಿ ವಿದ್ಯಾರ್ಥಿಗಳು 19 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹೀಗೆ ಒಟ್ಟು 1910 ಮಂದಿ ಪರೀಕ್ಷೆ ಬರೆಯುವರು.












