ಸುಳ್ಯ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 18ರಿಂದ ಆರಂಭಗೊಂಡಿದೆ, ಏಪ್ರಿಲ್ 2ರವರೆಗೆ ನಡೆಯಲಿದೆ.ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಿತು. ಮೊದಲ ದಿನವಾದ ಬುಧವಾರದಂದು
ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ) ವಿಷಯದ ಪರೀಕ್ಷೆ ನಡೆಯಿತು.ಪ್ರಥಮ ಭಾಷೆ ಪರೀಕ್ಷೆ ಸುಲಭವಾಗಿತ್ತು ಎನ್ನುತ್ತಾರೆ ವಿದ್ಯಾರ್ಥಿಗಳು.ಸುಳ್ಯ ತಾಲೂಕಿನಲ್ಲಿ ಇಂದಿನ ಪರೀಕ್ಷೆಗೆ 1864 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದು 1836 ಮಂದಿ ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.










