ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023 ರಿಂದ ದಿನಾಂಕ 15-04-2023 ವರೆಗೆ ನಡೆಯಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್
2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023 ರಿಂದ ದಿನಾಂಕ 15-04-2023 ವರೆಗೆ ನಡೆಸಲು ತಿರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ ದಿನಾಂಕ 28-11-2022 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ತಾತ್ಕಾಲಿಕ ವೇಳಾಪಟ್ಟಿ:
ಬೆಂಗಳೂರು, ಅ. 29: ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಎ.1ರಿಂದ ಎ.15ರವರೆಗೆ ಪರೀಕ್ಷೆಗಳು ನಡೆಯಲಿವೆ. ವೇಳಾಪಟ್ಟಿಗೆ ನ.28ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಎ.1ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಎ.4ರಂದು ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಎ.6ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯಲಿವೆ. ಎ.10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ. ಎ.12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕøತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಎ.15ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.