ಮಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಎ.6 ರಂದು ಮುಕ್ತಾಯಗೊಂಡಿತು.ಈ ಪರೀಕ್ಷೆಯ ಕೊನೆಯ ದಿನವಾದ ಏ.6ರ ಶನಿವಾರ ದ್ವಿತೀಯ ಭಾಷೆಯ ಪರೀಕ್ಷೆ ನಡೆಯಿತು. ದ.ಕ.ಜಿಲ್ಲೆಯಲ್ಲಿ ಈ ಪರೀಕ್ಷೆಗೆ ಒಟ್ಟು 28,688 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಅದರಲ್ಲಿ
28,338 ವಿದ್ಯಾಥಿಗಳು ಹಾಜರಾಗಿದ್ದಾರೆ ಹಾಗೂ 350 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ 6 ಕೇಂದ್ರಗಳಲ್ಲಿ ಪರೀಕ್ಷೆ ಪರೀಕ್ಷೆ ನಡೆದಿದ್ದು ಕೊನೆಯ ದಿನ 1898 ವಿದ್ಯಾರ್ಥಿಗಳು ನೋಂದಾವಣೆ ಮಾಡಿದ್ದು 1838 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.60 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಎ.15ರಿಂದ ಮೌಲ್ಯಮಾಪನ ನಡೆಯಲಿದ್ದು ಮೇ.ಮೊದಲ ವಾರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.