ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್ಎಸ್ಎಲ್ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ:
ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 1)
ಮಾರ್ಚ್ 18 – ಪ್ರಥಮ ಭಾಷೆ
ಮಾರ್ಚ್ 23 – ವಿಜ್ಞಾನ
ಮಾರ್ಚ್ 25 – ದ್ವಿತೀಯ ಭಾಷೆ
ಮಾರ್ಚ್ 28 – ಗಣಿತ
ಮಾರ್ಚ್ 30 – ತೃತೀಯ ಭಾಷೆ
ಏಪ್ರಿಲ್ 2 – ಸಮಾಜ ವಿಜ್ಞಾನ
ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 2)
ಮೇ 18 – ಪ್ರಥಮ ಭಾಷೆ
ಮೇ 19 – ವಿಜ್ಞಾನ
ಮೇ 20 – ದ್ವಿತೀಯ ಭಾಷೆ
ಮೇ 21 – ಗಣಿತ
ಮೇ 22 – ತೃತೀಯ ಭಾಷೆ
ಮೇ 23 – ಸಮಾಜ ವಿಜ್ಞಾನ.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಫೆಬ್ರವರಿ 28 – ಕನ್ನಡ, ಅರೇಬಿಕ್
ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3 – ಇಂಗ್ಲಿಷ್
ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5 – ಇತಿಹಾಸ
ಮಾರ್ಚ್ 6 – ಭೌತಶಾಸ್ತ್ರ
ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10 – ಅರ್ಥಶಾಸ್ತ್ರ
ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12 – ಹಿಂದಿ
ಮಾರ್ಚ್ 13 – ರಾಜ್ಯಶಾಸ್ತ್ರ
ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ.





