ಬೆಂಗಳೂರು:ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ʻಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿʼ ಗುರುವಾರ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ಮಂಡಳಿ, ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಇದೀಗ
ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಪಿಯುಸಿ ಪರೀಕ್ಷೆ–1, 2027ರ ಫೆಬ್ರುವರಿ 27ರಿಂದ ಮಾರ್ಚ್ 18ರವರೆಗೆ ನಡೆಯಲಿದೆ. ಪರೀಕ್ಷೆ–2 2027ರ ಮೇ 3ರಿಂದ 15ರವರೆಗೆ ನಡೆಯಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ–1, 2027ರ ಮಾರ್ಚ್ 22ರಿಂದ ಏಪ್ರಿಲ್ 5ರವರೆಗೆ ನಡೆಯಲಿದೆ. ಪರೀಕ್ಷೆ–2, 2027ರ ಮೇ 24ರಿಂದ 31ರವರೆಗೆ ನಡೆಯಲಿದೆ.









