ಮಂಗಳೂರು: 2023-24ರ ಶೈಕ್ಷಣಿಕ ಸಾಲಿನಲ್ಲಿ ಸಾಧನೆ ಮಾಡಿದ ಜಿಲ್ಲೆಯ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು.ಎಸ್ಎಸ್ಎಲ್ಸಿಯ ಆಯ್ದ 30 ವಿದ್ಯಾರ್ಥಿಗಳು ಹಾಗೂ ಪಿಯುಸಿಯ ಯ 43 ವಿದ್ಯಾರ್ಥಿಗಳು ಮತ್ತು
ಅವರ ಹೆತ್ತವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಮುಲೈ ಮುಹಿಲನ್ ಎಂ.ಪಿ., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ. ರಿಷ್ಯಂತ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ (ಪದವಿಪೂರ್ವ) ಸಿ.ಡಿ. ಜಯಣ್ಣ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ (ಪ್ರಾಥಮಿಕ ಹಾಗೂ ಪ್ರೌಢ ಶಾಲಾ) ವೆಂಕಟೇಶ್ ಸುಬ್ರಾಯ ಪಟಗಾರ್, ಹಾಗೂ ವಿದ್ಯಾರ್ಥಿಗಳ ಹೆತ್ತವರು, ರಕ್ಷಕರು, ಉಪನ್ಯಾಸಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಳ್ಳುತ್ತಾ, ಪ್ರತಿಯೊಂದು ವಿದ್ಯಾರ್ಥಿಗಳಿಗೂ ಈ ವಿಚಾರ ವಿನಿಮಯದ ಕಾರ್ಯಕ್ರಮವು ಸ್ಮರಣೀಯ ಹಾಗೂ ಉತ್ತೇಜನಕಾರಿಯಾಗಿರಲಿ ಎಂಬ ಕಾರಣಕ್ಕಾಗಿ, ವಿಶೇಷವಾಗಿ ಜಿಲ್ಲಾಧಿಕಾರಿಗಳ ನಿವಾಸದಲ್ಲೇ ಆಯೋಜಿಸಿರುವುದಾಗಿ ತಿಳಿಸಿದರು. ಮುಂದೆಯೂ ವಿದ್ಯಾರ್ಥಿಗಳನ್ನು ಉತ್ತೇಜಿಸುವಲ್ಲಿ ಈ ಕಾರ್ಯಕ್ರಮ ಮಾದರಿಯಾಗಿರಲಿ ಎಂದು ಆಶಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ,ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಸಿ.ಬಿ. ರಿಷ್ಯಂತ್ ಮಾತನಾಡಿದರು.ಆಗಮಿಸಿದ ವಿದ್ಯಾರ್ಥಿಗಳು ತಮ್ಮ ಹೆತ್ತವರೊಂದಿಗೆ ಜಿಲ್ಲಾಧಿಕಾರಿಗಳ ನಿವಾಸವನ್ನು ವೀಕ್ಷಿಸಿ. ಅಧಿಕಾರಿಗಳೊಂದಿಗೆ ಪೋಟೋ ಕ್ಲಿಕ್ಕಿಸಿ ಆನಂದಿಸಿದರು.