ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ – 1ರ ಫಲಿತಾಂಶವನ್ನು ಇಂದು (ಏ. 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಫಲಿತಾಂಶವನ್ನು
https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೇ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುವುದು ಎಂದೂ ಮಂಡಳಿ ತಿಳಿಸಿದೆ.














