ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಮೇ.2ರಂದು ಪ್ರಕಟವಾಗಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ
ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.