ಬೆಂಗಳೂರು:2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು.ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ
631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ರಾಜ್ಯಾದ್ಯಂತ 76.91ರಷ್ಟು ಫಲಿತಾಂಶ ಬಂದಿದೆ.ಉಡುಪಿ ಜಿಲ್ಲೆ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದ್ದು, ದ.ಕ ಜಿಲ್ಲೆ 92.12 ಶೇ. ಫಲಿತಾಂಶ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಶಿವಮೊಗ್ಗ ಜಿಲ್ಲೆ 88.67% ಫಲಿತಾಂಶದೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಮೊದಲನೇ ಸ್ಥಾನ ಹಾಗೂ ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ.
ಫಲಿತಾಂಶವನ್ನು https://karresults.nic.in/ ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.