ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವು ಮೇ 8 ರ ಬೆಳಗ್ಗೆ 11 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ
ಮೌಲ್ಯಮಾಪನ ಪ್ರಕ್ರಿಯೆಯು ಪೂರ್ಣಗೊಂಡಿದೆ.
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಎಸ್ಎಸ್ಎಲ್ಸಿಯ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿದೆ.
ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳಲಿದೆ. karresults.nic.in ಮೂಲಕ ಫಲಿತಾಂಶವನ್ನು ತಿಳಿಯಬಹುದಾಗಿದೆ. ಬೆಳಗ್ಗೆ 11 ಗಂಟೆಯ ನಂತರ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.