ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ಕಾಲೇಜಿನ
ಪ್ರಾಂಶುಪಾಲ ಸೋಮಶೇಖರ ನಾಯಕ್ ಧ್ವಜಾರೋಹಣ ನೆರವೇರಿಸಿಸರು.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಚಿದಾನಂದ ಕಂದಡ್ಕ, ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಎಂ.ಕೃಷ್ಣ ಭಟ್, ಪ್ರಾಥಮಿಕ ಶಾಲಾ ಮುಖ್ಯಗುರು ಮಾಧವ ಮೂಕಮಲೆ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂಧಿಗಳು, ಪ್ರಾಥಮಿಕ ಶಾಲಾ, ಪ್ರೌಢಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









