ಸುಳ್ಯ:ಸುಳ್ಯ ಬೀರಮಂಗಲದಲ್ಲಿರುವ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ. ಜ.20ರಂದು ಶಾಲೆಯಲ್ಲಿ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸೈಂಟ್ ಬ್ರಿಜಿಡ್ಸ್ ಶಾಲೆ ಜೊತೆ ಕಾರ್ಯದರ್ಶಿ ಹಾಗೂ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರುಗಳಾದ ರೆ.ಫಾದರ್ ಒಲ್ವಿನ್ ಎಡ್ವರ್ಡ್ ಡಿಕುನ್ಹಾ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ
ವಿಷಯ ತಿಳಿಸಿದರು.ಬೆಳಿಗ್ಗೆ 9 ಗಂಟೆಗೆ ದಿವ್ಯಬಲಿಪೂಜೆ ಕಾರ್ಯಕ್ರಮ,ಬೆಳಿಗ್ಗೆ10.15ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ರೆ.ಪಾ.ಒಲ್ವಿನ್ ಎಡ್ವರ್ಡ್ ಡಿಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ.ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಎಸ್ ಎಂ ಬಾಪೂಸಾಹೇಬ್,ನಗರ ಪಂಚಾಯತ್ ಮಾಜಿ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ,ಸುಳ್ಯ ಪದವಿ ಪೂರ್ವ ಕಾಲೇಜು ಪ್ರಾಧ್ಯಾಪಕಿ ಶಹನಾಝ್,ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಂಮನೆ,ಡಾ.ಸುನಿಧಿ ಎಸ್,ಚಲನಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಂತರ ಹಿರಿಯ ವಿದ್ಯಾರ್ಥಿಗಳ ಮತ್ತು ಪೋಷಕರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ,ಹಿರಿಯ ವಿದ್ಯಾರ್ಥಿಗಳಿಗೆ ಗೌರವರ್ಪಣೆ,ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.ಸಂಜೆ 4.30 ಅಮೃತಮಹೋತ್ಸವ ಸಮಾರಂಭ ನಡೆಯಲಿದೆ
ಅಮೃತಮಹೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿ ಅಧ್ಯಕ್ಷ ರು,ಮಂಗಳೂರು ಧರ್ಮಪಾಂತ್ಯ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ.ಪೀಟರ್ ಪೌಲ್ ಸಲ್ಡಾನ್ಹಾ ವಹಿಸಲಿದ್ದಾರೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ರೆ.ಫಾ.ಪ್ರವೀಣ್ ಲಿಯೋ ಲಸ್ರಾದೊ,ಸೈಂಟ್ ಬ್ರಿಜಿಡ್ಸ್ ಶಾಲೆ ಹಿರಿಯ ವಿದ್ಯಾರ್ಥಿ ಪದ್ಮಶ್ರೀ ಗಿರೀಶ್ ಭಾರದ್ವಾಜ್, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ ಮುಸ್ತಫಾ, ಸೈಂಟ್ ಬ್ರಿಜಿಡ್ಸ್ ಶಾಲೆಯ ಹಿರಿಯ ವಿದ್ಯಾರ್ಥಿ, ಜಮಖಂಡಿ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ಅರ್ಶದ್ ಅನ್ಸಾರಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸೈಂಟ್ ಬ್ರಿಜಿಡ್ಸ್ ಶಾಲೆಯ ಪದಾಧಿಕಾರಿಗಳು ಮಾಹಿತಿ ನೀಡಿದರು.
ಲಮಂಗಳೂರು ಪ್ರಾಂತ್ಯ ಪ್ರಾಂತೀಯ ಮುಖ್ಯಸ್ಥರಾದ ಸಿಸ್ಟರ್ ಕ್ಲೇರಾ ಮಿನೇಜಸ್,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಸುನೀಲ್ ಮಸ್ಕರೇನಸ್,ಸೈಂಟ್ ಜೊಸೆಫ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬ್ರಿಜಿಡ್ಸ್ ಮುಖ್ಯ ಶಿಕ್ಷಕಿ ಸಿಸ್ಟರ್ ಆ್ಯಂಟಿನಿ ಮೇರಿ ,ಪಾಲನಾ ಸಮಿತಿ ಉಪಾಧ್ಯಕ್ಷ ಸುನೀಲ್ ಮಸ್ಕರೇನಸ್, ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ನವೀನ್ ಮಚಾದೋ ಉಪಸ್ಥಿತರಿದ್ದರು.












