ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
2025–26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಬಜೆಟ್ನ ಪ್ರಮುಖ ಅಂಶಗಳು ಇಲ್ಲಿವೆ.
ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಮೀಸಲು.
ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆ ಈ ಯೋಜನೆಯ ಮೂಲಕ
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ
ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ
ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ
ನಾಗರೀಕ ಸೇವಾ ಪೂರೈಕೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಿ, ಕೌನ್ಸೆಲಿಂಗ್ ಮುಖಾಂತರ ವರ್ಗಾವಣೆ
ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸಾರಿಗೆಯ ಸುಗಮ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾವಣೆಗೆ ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ.
ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಕಳೆದ ಒಟ್ಟು 51,339 ಕೋಟಿ ಅನುದಾನ
2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ
ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ
ಹೂಡಿಕೆಗಳನ್ನು ಉತ್ತೇಜನಕ್ಕೆ 13,500 ಕೋಟಿ ಸಹಾಯಧನ ಮತ್ತು ಆರ್ಥಿಕ ನೆರವು
2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ.
2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ.
ತೆರಿಗೆಯೇತರ ರಾಜಸ್ವವು ವರ್ಷವಾರು ಶೇ10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ.
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ
ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ
ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ
1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ಸಹಾಯಧನ
ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ
5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ
12,000 ಕೃಷಿ ಹೊಂಡಗಳ ಸ್ಥಾಪನೆ
ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ
ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನ
ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿನೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ
ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ 25 ಕೋಟಿ.
20 ಕೋಟಿ ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್ʼ ಅನ್ನು ಸ್ಥಾಪನೆ. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ತೋಟಗಾರಿಕೆ.
ತೋಟಗಾರಿಕಾ ಅಭಿವೃದ್ಧಿ ಯೋಜನೆ-2ಗೆ 95 ಕೋಟಿ ಅನುದಾನ
ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ. ಸಹಾಯ ಧನ
ಅಡಿಕೆಯ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಣ ಕ್ರಮಗಳಿಗೆ 62 ಕೋಟಿ.
ಮೈಸೂರಿನಲ್ಲಿ NABARD ಸಹಯೋಗದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ
ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ