ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಈ ಸಲದ ಬಜೆಟ್ನಲ್ಲಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆ ಅಥವಾ ಘೋಷಣೆಯ ಮಾಹಿತಿ ಇಲ್ಲಿದೆ
ರೈತರಿಗಾಗಿ ‘ಭೂ ಸಿರಿ’ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ 10 ಸಾವಿರ ಹೆಚ್ಚುವರಿ ಸಹಾಯಧನ ನೀಡಲಾಗುವುದು.
ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ
ಬಸ್ ಪಾಸ್
‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.
‘ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು.
‘ಗೃಹಿಣಿ ಶಕ್ತಿ’ ಯೋಜನೆ ಜಾರಿ ಮಾಡಿ, 46,278 ಕೋಟಿ ಅನುದಾನ ನೀಡಲಾಗುವುದು.
‘ನಮ್ಮ ನೆಲೆ’ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ ನೀಡಲಾಗುವುದು.
‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ನೀರು ಸಂರಕ್ಷಣೆಗೆ ಹಾಗೂ ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ಮೀಸಲಿಡಲಾಗುವುದು.
ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ ಜಾರಿಗೆ ತರಲಾಗುವುದು.
‘ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು.
‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳನ್ನು ಅಭಿವೃದ್ಧಿ ಮಾಡಲಾಗುವುದು.
‘ಬದುಕುವ ದಾರಿ’ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ ನೀಡಲಾಗುವುದು
ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ 2 ಸಾವಿರ ನೀಡಲಾಗುವುದು.
100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ ರೂಪಿಸಲಾಗುವುದು.
‘ಜಲನಿಧಿ’ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ, ಗೋ ಶಾಲೆಗಳ ನಿರ್ಮಾಣಕ್ಕೆ ‘ಪುಣ್ಯ ಕೋಟಿ ದತ್ತು ಯೋಜನೆ’ ಹಣಕಾಸು ನೆರವು ನಿಡಲಾಗುವುದು.
‘ಸ್ವಚೇತನ’ ಯೋಜನೆಯಡಿ 5 ಸಾವಿರ ಅಂಗವಿಕಲರಿಗೆ ದ್ವಿಚಕ್ರ ವಾಹನ ನೀಡಬಹುದು.

ರೈತರಿಗಾಗಿ ರಾಜ್ಯ ಸರ್ಕಾರ ನೀಡಿದ ನೆರವು ಎಷ್ಟು? ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದ ರೈತರಿಗಾಗಿ ಏನೇನು ನೆರವು ನೀಡಲಾಗಿದೆ ಎಂದು ಮಹಿತಿ ನೀಡಿದರು.
ತಮ್ಮ ಬಜೆಟ್ ಭಾಷಣದ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ, ‘ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ’ ಎಂದರು.
ಈ ಬಾರಿ ನೀರಾವರಿ ಪಂಪ್ಸೆಟ್ಗಳಿಗೆ 52,590 ಕೋಟಿ ರೂ. ವಿದ್ಯುತ್ ಸಹಾಯಧನ ನೀಡಲಾಗಿದ್ದು ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4,900 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರುಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ. ಒದಗಿಸಲಾಗಿದ್ದು. ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಫಲಾನುಭವಿಗಳಿಗೆ 175 ಕೋಟಿ ರೂ. ಗಳ ನೆರವು ನೀಡಲಾಗಿದೆ. ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ. ವೆಚ್ಚ ಮಾಡಲಾಗಿದೆ.ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10,32 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 725 ಕೋಟಿ ರೂ. ಗಳನ್ನು ನೀಡಲಾಗಿದೆ. ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು ಇದನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.