ಬೆಂಗಳೂರು: ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು
ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಹಾಸನ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಜಿಟಿಜಿಟಿ ಮಳೆಯಾಗುವ ಸಂಭವ ಇದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಕೆಲವೆಡೆ ತುಂತುರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.