ಬೆಂಗಳೂರು:ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಎ.5 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲ ಭಾಗಗಳಲ್ಲಿ
ಗುಡುಗು ಸಹಿತ ಮಳೆಯ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮಳೆಯಾಗಬಹುದು.
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ ಎಂದು ತಿಳಿಸಿದೆ.ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.










