ಸುಳ್ಯ:ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡುವಂತೆ ಆಗ್ರಹಿಸಿ, ಕೆವಿಜಿ ವಿದ್ಯಾಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಡಾ.ರೇಣುಕಾಪ್ರಸಾದ್ ಕೆ.ವಿ. ಅವರ ಉಸ್ತುವಾರಿಗೊಳಪಟ್ಟ ಕೆವಿಜಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಮೆರವಣಿಗೆ ಮತ್ತು ಸಭೆ ನಡೆಸಿ

ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.ಕೆವಿಜಿ ವಿದ್ಯಾಸಂಸ್ಥೆಗಳ ಅಧ್ಯಾಪಕವೃಂದ ಸಿಬ್ಬಂದಿವರ್ಗ, ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಸರಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಬೇಕು, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು, ಪೂರಕ ಶೈಕ್ಷಣಿಕ ವಾತಾವರಣ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಕೆವಿಜಿ ಡೆಂಟಲ್ ಕಾಲೇಜು ಬಳಿಯಿಂದ ಮೆರವಣಿಗೆ ಮೂಲಕ ಆಗಮಿಸಿ ತಾಲೂಕು ಕಚೇರಿ ಸಭೆ ಮುಂಭಾಗದಲ್ಲಿ ಸಭೆ ನಡೆಸಿದರು. ಕೆವಿಜಿ ಇಂಜಿನಿಯರಿಂಗ್ ಕಾಲೇಜು, ಕೆವಿಜಿ ಡೆಂಟಲ್ ಕಾಲೇಜು, ಕೆವಿಜಿ ಐಟಿಐ ಮತ್ತಿತರರು ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.










