ಚೆನ್ನೈ: ಡೆಂಗ್ಯೂ ಜ್ವರದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ಲೇಟ್ಲೆಟ್ ಕಡಿಮೆ ಇದ್ದ ಕಾರಣ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆದ ನಂತರ
ಗಿಲ್ ಹೋಟೆಲ್ಗೆ ಮರಳಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯ ಆಡಿದ ನಂತರ ಟೀಂ ಇಂಡಿಯಾ ಎರಡನೇ ಪಂದ್ಯಕ್ಕಾಗಿ ದೆಹಲಿಗೆ ಪ್ರಯಾಣ ಬೆಳೆಸಿದೆ. ಆದರೆ,ಹ ಆರೋಗ್ಯ ಸಮಸ್ಯೆಯ ಕಾರಣ, ಗಿಲ್ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಚೆನ್ನೈನಲ್ಲಿ ಉಳಿಯಬೇಕಾಯಿತು. ಅವರು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇತ್ತೀಚಿನ ವರದಿ ಪ್ರಕಾರ ಅಹಮದಾಬಾದ್ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಗಿಲ್ ಆಡುವ ಸಾಧ್ಯತೆಗಳಿಲ್ಲ ಎಂದು ತಿಳಿದುಬಂದಿದೆ.