ನವದೆಹಲಿ: ಮಾಜಿ ಸಂಸದೆ ಸುಧಾ ಯಾದವ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.ಉಳಿದಂತೆ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.ಸಿಕ್ಕಿಂನ
ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.ಕೇರಳಂನ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ಆಯ್ಕೆ ಮಾಡಲಾಗಿದೆ.ಧಾಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ಆಯ್ಕೆ ಮಾಡಲಾಗಿದೆ.








