ಮಂಗಳೂರು:ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್
ಶುಕ್ರವಾರ (ಇಂದು) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ
ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು.ಪೊಲೀಸರು ಜಿಲ್ಲೆಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಪಡಿಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೆ.2ರ ಬೆಳಿಗ್ಗೆ 6 ರದ ಮೇ 6 ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕೆಲವು ಕಡೆ ಬಸ್ಗೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ.