ಸುಳ್ಯ:ವಿಕಸಿತ ಭಾರತ ಸಂಕಲ್ಪಡಿಯಲ್ಲಿ ಜೋಡಿಸಿ
ಈ ನೆಲದ ಸಂಸ್ಕೃತಿ, ಪರಂಪರೆಯ ಆಧಾರದಲ್ಲಿ ಸುಳ್ಯ ತಾಲೂಕು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನವನ್ನು ನಡೆಸಲಾಗುವುದು ಮತ್ತು ತಮ್ಮ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಸುಳ್ಯ ತಾಲೂಕು 60ರ ಸಂಭ್ರಮ ಆಚರಣಾ ಸಮಿತಿಯ
ವತಿಯಿಂದ ಸುಳ್ಯದ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ
ಸುಳ್ಯ 60 ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ತಾಲೂಕಿನ ಅಭಿವೃದ್ಧಿ ಕುರಿತ ಈ ರೀತಿಯ ಕಾರ್ಯಕ್ರಮ, ಚರ್ಚೆ ಉತ್ತಮ ಬೆಳವಣಿಗೆ. ಇದಕ್ಕಾಗಿ ಸಮಗ್ರವಾದ ಯೋಜನೆ ರೂಪಿಸಬೇಕಿದೆ. ಆಡಳಿತಾತ್ಮಕ ಮತ್ತು ಕಾನೂನು ರೀತಿಯಲ್ಲಿ ಪ್ರಯತ್ನ ನಡೆಸಿ ಈ ಅಭಿವೃದ್ಧಿ ಯೋಜನೆ ಮತ್ತು ಯೋಚನೆ ಅನುಷ್ಠಾನ ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಭವನ್ನು ಉದ್ಘಾಟಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಸುಳ್ಯ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಬೇಕು.ಅಭಿವೃದ್ಧಿಗೆ ಪೂರಕವಾದ ವಿಷನ್ನೊಂದಿಗೆ ಮುನ್ನಡೆಯಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ಸುಳ್ಯದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯಬೇಕಾಗಿದೆ. ಮುಂದಿನ 15 ವರ್ಷದಲ್ಲಿ ಸಂಪೂರ್ಣ ಅಭಿವೃದ್ಧಿಯಾಗಿ ನಂಬರ್ ವನ್ ತಾಲೂಕು ಮಾಡುವ ಆಶಯ ಇದೆ ಎಂದರು.

ಮಾಜಿ ಸಚಿವ ಎಸ್.ಅಂಗಾರ, ಮಾಜಿ ಶಾಸಕ ಕೆ.ಕುಶಲ,
ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್,
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ,ಎಒಎಲ್ಇ ಅಧ್ಯಕ್ಷರು ಹಾಗೂ ಸುಳ್ಯ ತಾಲೂಕು 60ರ ಸಂಭ್ರಮ ಆಚರಣಾ ಸಮಿತಿಯ

ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ , ಕಾರ್ಯಧ್ಯಕ್ಷ ಎಸ್.ಎನ್. ಮನ್ಮಥ, ಸಮಿತಿ ಉಪಾಧ್ಯಕ್ಷರಾದ ತಾಹಶೀಲ್ದಾರ್ ಮಂಜುಳಾ ಎಂ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರಧ್ವಜ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ, ವೆಂಕಟ್ ವಳಲಂಬೆ, ಜೆಡಿಎಸ್ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಎಂ.ಬಿ.ಫೌಂಡೇಷನ್ ಅಧ್ಯಕ್ಷ ಎಂಬಿ ಸದಾಶಿವ, ಸಂಭ್ರಮಾಚರಣಾ ಸಮಿತಿಯ

ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಹರೀಶ್ ಕಂಜಿಪಿಲಿ,ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್,ಕೋಶಾಧಿಕಾರಿ ಸಂತೋಷ್ ಜಾಕೆ,ಸಹ ಸಂಚಾಲಕರಾದ ಸಂತೋಷ್ ಕುತ್ತಮೊಟ್ಟೆ,ಸಂಘಟನಾ ಕಾರ್ಯದರ್ಶಿ ವೆಂಕಟ್ ದಂಬೆಕೋಡಿ, ಕಾರ್ಯದರ್ಶಿಗಳಾದ ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.
ಸಂಭ್ರಮ ಆಚರಣಾ ಸಮಿತಿಯ ಕಾರ್ಯಾಧ್ಯಕ್ಷ ಎಸ್.ಎನ್. ಮನ್ಮಥ ಸ್ವಾಗತಿಸಿದರು, ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಹಾಗೂ ಹರೀಶ್ ಕಂಜಿಪಿಲಿ ಜನಪ್ರಣಾಳಿಕೆ ವಾಚಿಸಿದರು.
ಜೊತೆ ಕಾರ್ಯದರ್ಶಿ ಸಂತೋಷ್ ಜಾಕೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಹಾಗೂ ಶಶಿಧರ ಎಂ.ಜೆ.ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ಪೂ.9 ಗಂಟೆಗೆ ಸುಳ್ಯದ ಶಾಸ್ತ್ರಿ ವೃತ್ತದಿಂದ ಶ್ರೀ ಕುರುಂಜಿ ಜಾನಕಿ ವೆಂಕಟ್ರಮಣ ಸಭಾಂಗಣದ ವರೆಗೆ ಭವ್ಯವಾದ ಮೆರವಣಿಗೆ ನಡೆಯಿತು.ಸುಳ್ಯದ 60 ವರ್ಷಗಳ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನಗೊಂಡಿತು. 60ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಸುಳ್ಯ ತಾಲೂಕಿಗಾಗಿ ಶ್ರಮಿಸಿದ ಹಿರಿಯರನ್ನು ಅವರ ಕುಟುಂಬದವರನ್ನು, ಸಂಸದರು, ಶಾಸಕರು, ಮಾಜಿ ಸಂಸದರು ಹಾಗೂ ಶಾಸಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸುಳ್ಯ ಅಂದು, ಇಂದು, ಮುಂದೆ ಎಂಬ ವಿಚಾರ ಸಂಕಿರಣ ನಡೆಯಿತು.ಭವ್ಯ ಸಂಕಲ್ಪ ಸುಳ್ಯದ ಪ್ರತಿಜ್ಞೆ ಬೋಧಿಸಲಾಯಿತು












