ಸುಳ್ಯ:ಸುಳ್ಯ ಸುಬ್ರಹ್ಮಣ್ಯ ಉಪ ವಿಭಾಗದ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ವರ್ಗಾವಣೆಯಾಗಿದೆ.ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ
ಪ್ರವೀಣ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಪೈ ಅವರನ್ನು ಸುಳ್ಯ ಎಸಿಎಫ್ ಆಗಿ ನೇಮಕಗೊಳಿಸಿ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ. ಪ್ರಶಾಂತ್ ಕುಮಾರ್ ಪೈ ಅವರು ಈ ಹಿಂದೆ ಸುಳ್ಯ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.