ಸುಳ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಡಾ.ಜಗದೀಶ್ ಕೆ. ನಾಯ್ಕ ಅವರು ನೇಮಕಗೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಡಾ.ಜಗದೀಶ್ ಅವರು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ಹಾಗೂ ಸುಳ್ಯ ತಾಲೂಕಿನ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.









