ಸುಳ್ಯ: ಸುಳ್ಯದ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಡಿ.ಕೆ.ಶಿವಕುಮಾರ್ ಮಾತನಾಡಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರ ಬಳಿಗೆ
ತಲುಪಿಸಲು ಕಾರ್ಯಕರ್ತರು ಪ್ರಯತ್ನಿಸಬೇಕು ಪ್ರತಿಯೊಂದು ಕಾರ್ಯಕ್ರಮಗಳು ಸರಕಾರ ರಾಜ್ಯಮಟ್ಟದಲ್ಲಿ ಲಾಂಚ್ ಮಾಡಿದಾಗ ಪ್ರತಿ ಹಳ್ಳಿಹಳ್ಳಿಗೂ ಅದರ ಸಂದೇಶವನ್ನು ತಲುಪಿಸಬೇಕು ಎಂದರು. ದ. ಕ. ಜಿಲ್ಲೆಯಲ್ಲಿ ಪಕ್ಷಕ್ಕೆ ಉಂಟಾಗಿರುವ ಹಿನ್ನಡೆ ತಾತ್ಕಾಲಿಕವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸಂಘಟಿತರಾಗಿ ಕೆಲಸ ಮಾಡಿ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ, ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ ಮುಸ್ತಫ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಫವಾಜ್ ಕನಕಮಜಲು,
ಕೆದಂಬಾಡಿ ರಾಮಯ್ಯಗೌಡ ಪ್ರತಿಮೆ ಸ್ಥಾಪನೆ ಸಮಿತಿ ಸಂಚಾಲಕ ಕಿರಣ್ ಬುಡ್ಲೆಗುತ್ತು,,ಮೊದಲಾದವರು ಉಪಸ್ಥಿತರಿದ್ದರು