ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಕ್ಕೆಅ.9 ರಂದು ಚಾಲನೆ ದೊರೆತಿದೆ. ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆ ನಡೆಯುವುದರ ಮೂಲಕ 9 ದಿನಗಳ ಕಾಲ ನಡೆಯುವ
ದಸರಾಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಶಾತದಾಂಬಾ ವೇದಿಕೆಯವರೆಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠಾ ಮೆರವಣಿಗೆ ನಡೆದು 10.17ಕ್ಕೆ ಪ್ರತಿಷ್ಠೆ ನಡೆಯಿತು. ಪುರೋಹಿತ ನಾಗರಾಜ ಭಟ್ ಹಾಗೂ ಸುದರ್ಶನ ಭಟ್ ಉಜಿರೆ ನೇತೃತ್ವದಲ್ಲಿ ದೇವಿಯ ಪ್ರತಿಷ್ಟೆ ಹಾಗೂ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶಾರದಾಂಬಾ, ದಸರಾ ಸಮೂಹ ಸಂಸ್ಥೆಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಡಿ.ವಿ. ಲೀಲಾಧರ್, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್,
ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶಾರದಾಂಬ ಉತ್ಸವ ಸಮಿತಿಯ ಉಪಾಧ್ಯಕ್ಷ ಡಾ.ಉಜ್ವಲ್ ಯು.ಜೆ,ಗೌರವ ಸಲಹೆಗಾರರಾದ
ಉಪಾಧ್ಯಕ್ಷರಾದ ಡಾ. ಯಶೋದಾ ರಾಮಚಂದ್ರ, ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿಯ ಖಜಾಂಜಿ ಸುನಿಲ್ ಕೇರ್ಪಳ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್, ಗೌರವ ಸದಸ್ಯರಾದ ತೀರ್ಥರಾಮ ಜಾಲ್ಸೂರು, ಶಾರದಾಂಬ ಉತ್ಸವ