ಸುಳ್ಯ: ಪ್ರತಿ ವರ್ಷ ಅದ್ದೂರಿಯಾಗಿ ನಡೆಯುವ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ಕ್ಕೆ ಸರಕಾರದ ಅನುದಾನ ತರಿಸಲು ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿ ಇದರ
ಆಶ್ರಯದಲ್ಲಿ ಅ.20 ರಿಂದ 28ರವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆಯುವ 52ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ವೈಭವದ ದಸರಾ ಉತ್ಸವ ನಡೆಯಲಿದೆ.ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್,ಶ್ರೀ ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಉಪಾಧ್ಯಕ್ಷರಾದ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ,
ಸಾರ್ವಜನಿಕ ಶ್ರಿ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪುರುಷೋತ್ತಮ ಕೆ, ಪದಾಧಿಕಾರಿಗಳಾದ ರಾಜು ಪಂಡಿತ್, ಸತೀಶ್ ಎನ್.ಕೆ, ಮಂಜುನಾಥ ಬಳ್ಳಾರಿ, ದೀಪಕ್ ಪಿ.ಎಸ್, ಕುಸುಮಾಧರ ರೈ ಬೂಡು, ಪದ್ಮನಾಭ ಅರ್ಭಡ್ಕ, ಹೇಮನಾಥ ಕೇರ್ಪಳ ಉಪಸ್ಥಿತರಿದ್ದರು.