ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಶ್ರೀ ಶಾರದಾಂಬಾ ಉತ್ಸವ ಸಮಿತಿ ಇವರ ಜಂಟಿ ಆಶ್ರಯದಲ್ಲಿ ನಡೆಯವ ಶ್ರೀ ಶಾರದಾಂಬ ಉತ್ಸಚ ಸುಳ್ಯ ದಸರಾ 2026 ಅ.16ರಿಂದ ಅ.24ರ ತನಕ ನಡೆಯಲಿದೆ. ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸುಳ್ಯ
ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ್.ಡಿ.ವಿ. ಆಮಂತ್ರಣ ಬಿಡುಗಡೆ ಮಾಡಿದರು. ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಶಾರದಾಂಬ ಉತ್ಸವ ಸಮಿತಿಯ ಗೌರವ ಸಲಹೆಗಾರರಾದ
ಎನ್.ಎ.ರಾಮಚಂದ್ರ, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಮಹಿಳಾ ಸಮಿತಿ ಅಧ್ಯಕ್ಷೆ ಲತಾ ಮಧುಸೂದನ್,
ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಖಜಾಂಚಿ ಸುನಿಲ್ ಕುಮಾರ್ ಕೇರ್ಪಳ, ಗೌರವ ಸದಸ್ಯರಾದ ಹರೀಶ್ ಕಂಜಿಪಿಲಿ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಎಂ.ಕೆ.ಸತೀಶ್, ಪ್ರಮುಖರಾದ ಕೃಪಾಶಂಕರ ತುದಿಯಡ್ಕ, ಶಿವನಾಥ ರಾವ್, ಶ್ರೀನಾಥ್ ಆಲೆಟ್ಟಿ, ಸನತ್.ಪಿ.ಆರ್, ರವಿಚಂದ್ರ. ಕೊಡಿಯಾಲಬೈಲ್, ಚಂದ್ರಶೇಖರ ಪಂಡಿತ್, ಕುಸುಮಾಧರ ರೈ ಬೂಡು, ರಂಜಿತ್ ಎನ್.ಆರ್, ಪ್ರಮೋದ್, ಪ್ರೀತಮ್, ನವೀನ್ ಎಲಿಮಲೆ, ವರ್ಷಿತ್ ಮತ್ತಿತರರು ಉಪಸ್ಥಿತರಿದ್ದರು.












