ಸುಳ್ಯ:54ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಅ.7ರ ವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೂ ಶಾರದಾಂಬ ಕಲಾ ವೇದಿಕೆಯಲ್ಲಿ ನಡೆಯುತಿದೆ. ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ಶ್ರೀ ಶಾರದಾಂಬ
ದಸರಾ ಸೇವಾ ಟ್ರಸ್ಟ್, ಸುಳ್ಯ ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ 9 ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಅ.1ರಂದು ಸಂಜೆ ಶ್ರೀ ವಿಷ್ಣು ಭಜನಾ ಮಂಡಳಿ ಕಾಯರ್ತೋಡಿ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಿಂದ ಹಳೆ ಚಿತ್ರಗೀತೆಗಳ ಸಂಘಮ ‘ನೆನಪು ನೀನಾದ’ ನಡೆಯಿತು.
ಸೆ.30ರಂದು ಸಂಜೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಟ್ಟಂಪಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾನ ನೃತ್ಯ ಅಕಾಡೆಮಿ ಮಂಗಳೂರು ಮತ್ತು ಸುಳ್ಯ ಕಲಾವಿದರಿಂದ ನೃತ್ಯ ಸಂಗಮ ಮತ್ತು ನೃತ್ಯ ರೂಪಕ – ಶ್ರೀನಿವಾಸ ಕಲ್ಯಾಣ ಮನಸೂರೆಗೊಂಡಿತು.












