ಸುಳ್ಯ: ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದಲ್ಲಿ ಇಂದು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಾಹಾಯಾಗ ಮತ್ತು ಅಷ್ಟಾವಧಾನ ಸೇವೆ ಹಾಗೂ ಮಾತೆಯರಿಂದ ಸಾಮೂಹಿಕ
ಕುಂಕುಮಾರ್ಚನೆ ನಡೆಯಿತು. ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಚಂಡಿಕಾಯಾಗ ಕೇಶವ ಕೃಪಾ ವೇದ ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ನೆರವೇರಿತು. ಸಂಜೆ 6ರಿಂದ ಸಾಮೂಹಿಕ ಪ್ರಾರ್ಥನೆ, ದೀಪಾರಾಧನೆ, ಸ್ವಸ್ತಿ ಪುಣ್ಯಾಹ, ಅಗ್ನಿಪ್ರತಿಷ್ಠೆಯ ಬಳಿಕ ಯಾಗ ಆರಂಭಗೊಂಡಿತು. ರಾತ್ರಿ ಶ್ರೀದೇವಿಯ ಮಹಾಪೂಜೆ, ಅನ್ನಸಂಪರ್ಪಣೆ ನಡೆಯಿತು.ಶಾರದಾಂಬ, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ವಿಶೇಷ ಪ್ರಾರ್ಥನೆ ನಡೆಸಿದರು.
ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಡಿ.ವಿ. ಲೀಲಾಧರ್, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್, ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್,ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.