ಸುಳ್ಯ:ಹಲವಾರು ವರ್ಷದ ಪರಿಶ್ರಮದಿಂದ ಮತ್ತು ಸಂಘಟನಾ ಶಕ್ತಿಯಿಂದ ಸುಳ್ಯ ದಸರಾ ದೊಡ್ಡ ಉತ್ಸವವಾಗಿ ಪರಿವರ್ತನೆಯಾಗಿದೆ. ದಸರಾ ಉತ್ಸವದಿಂದ ಸುಳ್ಯಕ್ಕೆ ದೊಡ್ಡ ಗೌರವ ಬಂದಿದೆ ಎಂದು ಮಾಜಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆಯುತ್ತಿರುವ
53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮಾತನಾಡಿ ವಿಶ್ವ ವಿಖ್ಯಾತ ಮೈಸೂರು ದಸರಾದಂತೆ ಸುಳ್ಯ ದಸರಾದ ವೈಭವವು ಜಗದಗಲಕ್ಕೆ ಪಸರಿಸುವಂತಾಗಲಿ ಎಂದು ಹಾರೈಸಿದರು. ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ. ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್.ಅಂಗಾರ ಹಾಗೂ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್ ಅವರನ್ನು ಸನ್ಮಾನಿಸಲಾಯಿತು.
ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್, ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಮುಖ್ಯ ಅತಿಥಿಯಾಗಿದ್ದರು.
ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಭಾಗೀರಥಿ ಮುರುಳ್ಯ, ಶ್ರೀ ಶಾರದಾಂಬ ಮಹಿಳಾ ಸಮಿತಿ ಅಧ್ಯಕ್ಷೆ, ಶಶಿಕಲಾ ನೀರಬಿದಿರೆ, ಸಲಹಾ ಸಮಿತಿ ಸದಸ್ಯ ಎಂ.ವೆಂಕಪ್ಪ ಗೌಡ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್,ಶಾರದಾಂಬ ಸೇವಾ ಸಮಿತಿಯ
ಉಪಾಧ್ಯಕ್ಷರಾದ ಡಾ. ಯಶೋದಾ ರಾಮಚಂದ್ರ, ಲತಾ ಮಧುಸೂಧನ್
ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿ,
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ಶಿವಪ್ರಸಾದ್ ಆಲೆಟ್ಟಿ, ಸುಶ್ಮಿತ ಕಡಪಳ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಪ್ರಥಮ ದಿನದ ಸಾಂಸ್ಕೃತಿಕ ಉತ್ಸವದ ಭಾಗವಾಗಿ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು.