ಸುಳ್ಯ: ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆಯುತ್ತಿರುವ 54ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ
ಸೆ.29ರಂದು ಸಂಜೆ ಚಾಲನೆ ದೊರೆತಿದೆ. ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಮುಖ್ಯ ಅತಿಥಿಯಾಗಿದ್ದರು. ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ. ಅಧ್ಯಕ್ಷತೆ ವಹಿಸಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್,ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ಸುನಿಲ್ ಕೇರ್ಪಳ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್,ಶ್ರೀ ಶಾರದಾಂಬ ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಯಶೋಧಾ ರಾಮಚಂದ್ರ, ಅಧ್ಯಕ್ಷೆ ಲತಾ ಮಧುಸೂಧನ್, ಕಾರ್ಯದರ್ಶಿ ಶ್ವೇತಾ,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್ ವಂದಿಸಿದರು.ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೆ.ಸತೀಶ್ ಆಚಾರ್ಯ ಮತ್ತು ಬಳಗದ ಕಲಾ ಕೇಸರಿ ಜಾಲ್ಸೂರು ಇವರಿಂದ ಭಕ್ತಿಗಾನ ಸುಧಾ ಕಾರ್ಯಕ್ರಮ ನಡೆಯಿತು.





