ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆಯುತ್ತಿರುವ
55ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅ.16ರಂದು ಸಂಜೆ ಚಾಲನೆ ದೊರೆತಿದೆ. ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಔಘಡ್ ಪೀರ್ ಯೋಗಿ ರಾಜೇಶ್ನಾಥ್ಜಿ ಉದ್ಘಾಟಿಸಿದರು. ಧರ್ಮ ರಕ್ಷಣೆಯಾಗಲು ನಮ್ಮ ಧಾರ್ಮಿಕತೆ, ಸಂಸ್ಕಾರ, ಸಂಸ್ಕೃತಿ ಉಳಿಸಬೇಕು ಎಂದು ಅವರು ಹೇಳಿದರು. ಧಾರ್ಮಿಕ ಶ್ರೇಷ್ಠತೆಯನ್ನು ಕಾಯ್ದುಕೊಂಡಿರುವ ದಸರಾ ಉತ್ಸವ ಸಮಿತಿಯ ಸತತ ಪ್ರಯತ್ನದಿಂದ ಮೈಸೂರು, ಮಡಿಕೇರಿಯಲ್ಲಿ ಕಾಣುತ್ತಿದ್ದ ದಸರಾ ವೈಭವ ಸುಳ್ಯದಲ್ಲಿ ಕಾಣುವಂತಾಗಿದೆ. ಇದು ನಾಡಿನ ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಎಂದು ಅವರು ಹೇಳಿದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಅಧ್ಯಕ್ಷತೆ ವಹಿಸಿದ್ದರು.ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ

ಯೋಜನಾಧಿಕಾರಿ ಮಾಧವ ಗೌಡ ಮುಖ್ಯ ಅತಿಥಿಯಾಗಿದ್ದರು. ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್,ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ಸುನಿಲ್ ಕೇರ್ಪಳ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಶ್ರೀ ಶಾರದಾಂಬಾ ಉತ್ಸವ ಸಮಿತಿಯ ಕೋಶಾಧಿಕಾರಿ ಬೆಳ್ಯಪ್ಪ ಗೌಡ ಬಳ್ಳಡ್ಕ,ಶ್ರೀ ಶಾರದಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಲತಾ
ಮಧುಸೂಧನ್, ಕಾರ್ಯದರ್ಶಿ ಶ್ವೇತಾ ಪ್ರಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ದಸರಾ ಉತ್ಸವ ಸಮಿತಿಯ

ಕೋಶಾಧಿಕಾರಿ ಸುನಿಲ್ ಕೇರ್ಪಳ ಸ್ವಾಗತಿಸಿದರು.ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್ ವಂದಿಸಿದರು. ಜಯಂತ ಕೇರ್ಪಳ ಮತ್ತು ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶ್ರೀ ಗುರು ರಾಘವೇಂದ್ರ ಮಕ್ಕಳ ಕಲಾ ತಂಡದ ವತಿಯಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.










