ಸುಳ್ಯ:ಕಳೆದ ಅರ್ಧ ಶತಮಾನದಿಂದ ಶ್ರೀ ಶಾರದಾಂಬಾ ಉತ್ಸವ ಮತ್ತು ದಸರಾ ಆಚರಣೆ ಸುಳ್ಯದ ಧಾರ್ಮಿಕ ಜಾಗೃತಿಗೆ ಮತ್ತು ಕಲಾ ಸಾಂಸ್ಕೃತಿಕ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.
ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 52ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ ಅಂಗವಾಗಿ
ನಡೆಯುವ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ಎಲ್ಲರೂ ಒಟ್ಟಾಗಿ ಜಾತ್ರೆಯಂತೆ ನಡೆಸುವ ಸುಳ್ಯ ದಸರಾ ನಾಡಿಗೆ ಸಂಭ್ರಮವನ್ನು ನೀಡುತ್ತದೆ. ಹಲವಾರು ಪ್ರತಿಭೆಗಳಿಗೆ ವೇದಿಕೆಯನ್ನು ಒದಗಿಸಿದೆ ಎಂದು ಅವರು ಹೇಳಿದರು.
ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ..ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ ನಿರ್ದೇಶಕರಾದ ಪ್ರವೀಣ್ ಕುಮಾರ್, ಉದ್ಯಮಿಗಳಾದ ನವೀನ್ ಕುಮಾರ್ ಕೆ.ಟಿ, ಮಧುಕಿರಣ್ ಕೆ.ಎನ್, ಅತಿಥಿಗಳಾಗಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಉಪಾಧ್ಯಕ್ಷರಾದ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪುರುಷೋತ್ತಮ ಕೆ, ಶಾರದಾಂಬಾ ಸೇವಾ ದಸರಾ ಸೇವಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸತೀಶ್ ಎಂ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುರೋಹಿತ ನಾಗರಾಜ ಭಟ್ ಪ್ರಾರ್ಥಿಸಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು ಸ್ವಾಗತಿಸಿ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ನಿರ್ದೇಶಕರಾದ ರಾಜು ಪಂಡಿತ್ ವಂದಿಸಿದರು. ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾಶ್ರೀ ರಾಧಾಕೃಷ್ಣ ನಿರ್ದೇಶನದಲ್ಲಿ
ಗಾನ ನೃತ್ಯ ಅಕಾಡೆಮಿಯ ವತಿಯಿಂದ ನೃತ್ಯ ಸಂಗಮ ಮತ್ತು ನೃತ್ಯ ರೂಪಕ ನಡೆಯಿತು.