ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅ.9 ರಿಂದ ಆರಂಭಗೊಂಡಿದೆ. ಇದರ ಅಂಗವಾಗಿ ಹಸಿರುವಾಣಿ ಮೆರವಣಿಗೆ ನಡೆಯಿತು.ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ
ಚೆನ್ನಕೇಶವದ ದೇವಸ್ಥಾನದ ಮುಂಭಾಗದ ಶಾರದಾಂಬಾ ಕಲಾ ವೇದಿಕೆಯ ತನಕ ಆಕರ್ಷಕ ಕುಣಿತ ಭಜನೆಯೊಂದಿಗೆ ಹಸಿರುವಾಣಿ ಮೆರವಣಿಗೆ ನಡೆಯಿತು. ಹತ್ತಕ್ಕೂ ಹೆಚ್ಚು ಭಜನಾ ತಂಡಗಳಿಂದ ಕುಣಿತ ಭಜನೆಯೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಚೆಂಡೆ, ವಾದ್ಯ ಮೇಳಗಳು ಮೆರುಗು ನೀಡಿದವು.
ಮೆರವಣಿಗೆಯಲ್ಲಿ ಸಾಗಿ ಬಂದು ಹಸಿರುವಾಣಿ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಶಾರದಾಂಬಾ, ದಸರಾ ಸಮೂಹ ಸಂಸ್ಥೆಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,
ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಡಿ.ವಿ. ಲೀಲಾಧರ್, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್,
ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ
ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್,
ಹರೀಶ್ ಕಂಜಿಪಿಲಿ, ಡಾ.ಯಶೋದಾ ರಾಮಚಂದ್ರ, ಲತಾ ಮಧುಸೂದನ, ದಸರಾ ಉತ್ಸವ ಸಮಿತಿಯ ಖಜಾಂಜಿ ಸುನಿಲ್ ಕೇರ್ಪಳ, ನಿಕೇಶ್ ಉಬರಡ್ಕ, ಜಿನ್ನಪ್ಪ ಪೂಜಾರಿ ಮತ್ತಿತರರು ಈ ಸಂದರ್ಭಗಳಲ್ಲಿ ಉಪಸ್ಥಿತರಿದ್ದರು.