ಸುಳ್ಯ:ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53,ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ ಸುಳ್ಯ ದಸರಾ-2024 ರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆಮಂತ್ರಣ ಪತ್ರಿಕೆಯನ್ನು
ಬಿಡುಗಡೆ ಮಾಡಿದರು. ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿದರೆ, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಉಪಾಧ್ಯಕ್ಷರಾದ ಲತಾ ಮಧುಸೂಧನ್, ಹರೀಶ್ ರೈ ಉಬರಡ್ಕ,ಸದಸ್ಯರಾದ ಚಿದಾನಂದ ವಿದ್ಯಾನಗರ ಚಂದ್ರಶೇಖರ ಪಂಡಿತ್, ದೀಪಕ್ ವಿಷ್ಣು ಸರ್ಕಲ್, ಹರಿಶ್ಚಂದ್ರ ಪಂಡಿತ್, ಕುಸುಮಾಧರ ರೈ ಬೂಡು, ಚಂದ್ರಶೇಖರ ಕೇರ್ಪಳ, ರಮೇಶ್ ಶೆಟ್ಟಿ, ಪ್ರಸಾದ್ ಕಾಟೂರು, ಶಾರದಾಂಬ ದಸರಾ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಎಂ.ಕೆ.ಸತೀಶ್,
ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ರೈ, ಖಜಾಂಜಿ ಸುನಿಲ್ ಕುಮಾರ್ ಕೇರ್ಪಳ,ಶ್ರೀ ಶಾರದಾಂಬ ಉತ್ಸವ ಸಮಿತಿಯ
ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಗೌರವ ಸಲಹೆಗಾರರಾದ ಎನ್.ಜಯಪ್ರಕಾಶ್ ರೈ, ಎನ್.ಎ.ರಾಮಚಂದ್ರ, ಉಪಾಧ್ಯಕ್ಷರಾದ ಮಧುಸೂದನ ಕುಂಬಕ್ಕೋಡು, ಬಾಲಕೃಷ್ಣ ಎಸ್.ಬಿ.ಲ್ಯಾಬ್, ಗಿರೀಶ್ ಡಿ.ಎಸ್, ತೀರ್ಥಕುಮಾರ ಕುಂಚಡ್ಕ, ಜಿನ್ನಪ್ಪ ಪೂಜಾರಿ, ಶಿವನಾಥ್ ರಾವ್, ಸತೀಶ್ ಕೆ.ಜಿ,
ಸಂದೇಶ ಕುರುಂಜಿ, ಶ್ರಿ ಶಾರದಾಂಬಾ ಮಹಿಳಾ ಸಮಿತಿಯ ಕಾರ್ಯದರ್ಶಿ ಶ್ರೀದೇವಿ ನಾಗರಾಜ ಭಟ್,ಗೌರವ ಸದಸ್ಯರಾದ ಶಿಲ್ಪಾ ಸುದೇವ್, ಕಿಶೋರಿ ಶೇಟ್, ನಮಿತ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.