ಸುಳ್ಯ:ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸಲು ದಸರಾ ಪೂರಕ. ವಿಶೇಷವಾಗಿ ಒಂದು ದಿನ ಮಹಿಳಾ ದಸರಾ ಆಚರಿಸುವುದು ಸುಳ್ಯ ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು ತಂದಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯದಲ್ಲಿ ನಡೆಯುತ್ತಿರುವ ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ
ಮಹಿಳಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು.ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಲತಾ ಮಧುಸೂದನ್, ಗೌರವಾಧ್ಯಕ್ಷೆ ಡಾ.ಯಶೋಧಾ ರಾಮಚಂದ್ರ, ಕಾರ್ಯದರ್ಶಿ ಶ್ವೇತಾ ಪ್ರಶಾಂತ್ ಹಾಗು ಮಹಿಳಾ ಸಮಿತಿಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ

ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಶಾರದಾಂಬ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ 55 ನೇ ವರ್ಷದ ಶಾರದಾಂಬಾ ಉತ್ಸವ ಸುಳ್ಯ ದಸರಾದ ನಾಲ್ಕನೇ ದಿನ
ಮಹಿಳಾ ದಸರಾ ನಡೆಯುತ್ತಿದ್ದು, ಇದರ ಅಂಗವಾಗಿ ಮಹಿಳೆಯರಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು, ಆಟೋಟಗಳು ನಡೆಯಲಿದೆ.










