ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ನಗರ ಪಂಚಾಯತ್, ವಿವಿಧ ಶಾಲಾ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ಗಾಂಧಿನಡಿಗೆ ಕಾರ್ಯಕ್ರಮ ಸುಳ್ಯ ನಗರದಲ್ಲಿ ನಡೆಯಿತು. ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ
ಗಾಂಧಿನಡಿಗೆ ಗಾಂಧಿನಗರ ಗಾಂಧಿ ಪಾರ್ಕ್ ಬಳಿಯಲ್ಲಿ ಸಮಾಪನಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಗಾಂಧಿ ಚಿಂತನ ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್, ಸಂಚಾಲಕರಾದ ಡಾ.ಸುಂದರ ಕೇನಾಜೆ, ಶಂಕರ ಪೆರಾಜೆ, ಶರೀಫ್ ಕಂಠಿ ಮತ್ತಿತರರು ಉಪಸ್ಥಿತರಿದ್ದರು.