ಸುಳ್ಯ:ಸುಳ್ಯದ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ 58ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಆರಂಭಗೊಂಡಿದೆ.ಸೆ 18ರ ತನಕ ವಿವಿಧ ಧಾರ್ಮಿಕ ಹಾಗು

ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಗಣಪತಿ ಹವನ, ಮೂರ್ತಿ ಪ್ರತಿಷ್ಠೆ ನಡೆಯಿತು.ಉತ್ಸವದ ಉದ್ಘಾಟನೆಯನ್ನು ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ನೆರವೇರಿಸಿದರು. ಸಿದ್ದಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಕೆ.ಎಸ್, ಅಧ್ಯಕ್ಷತೆ ವಹಿಸಿದ್ದರು.
ಚೆನ್ನಕೇಶವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು. ಬಳಿಕ
5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳ ತಂಡಕ್ಕೆ ಭಜನಾ ಸ್ಪರ್ಧೆ ನಡೆಯಿತು.












