ಸುಳ್ಯ:ಸುಳ್ಯದ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುತ್ತಿರುವ 58ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಅಂಗಾವಗಿ ಧಾರ್ಮಿ ಸಭಾ ಕಾರ್ಯಕ್ರಮ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದರು.ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳ ಮತ್ತು ಭಜನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು. ಭರತ್ ಪಿ.ಯು ಹಾಗು
ಶಶಿಧರ ಎಂ.ಜೆ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭರತ್ ಪಿಂಡಿಮನೆ ವಂದಿಸಿದರು. ಸೋಮನಾಥ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕೆ.ಆರ್. ಗೋಪಾಲಕೃಷ್ಣ ಬಳಗ ಸುಳ್ಯ ಇವರಿಂದ ದೇವಾಭಿಮಾನ ದೇಶಾಭಿಮಾನ ಗಾನಾಮೃತ ನಡೆಯಿತು.











